alex Certify ‘ST’ ಸಮುದಾಯದ ಸಂಶೋಧನಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ST’ ಸಮುದಾಯದ ಸಂಶೋಧನಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳಲ್ಲಿ ಫೆಲೋಶಿಪ್ ಪಡೆಯದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ ರೂ.25,000/- ಗಳಂತೆ ಶಿಷ್ಯವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 14 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051., ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು, ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29535045, 9480843049., ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್, ಬಸ್ ಸ್ಟ್ಯಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ: 080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...