ಬೆಂಗಳೂರು :ರಾಜ್ಯದ ವಸತಿ ಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 833 ವಸತಿ ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಈ ಕುರಿತು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಮಾಹಿತಿ ನೀಡಿದ್ದು, ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮಕ್ಕಳಿಗೆ ಆಧುನಿಕ ಶಿಕ್ಷಣದ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪ್ರತಿ ವಸತಿ ಶಾಲೆಯಲ್ಲೂ ಕನಿಷ್ಠ ಒಂದು ಕೊಠಡಿಯನ್ನು ಸ್ಮಾರ್ಟ್ ತರಗತಿಗೆ ಸಜ್ಜುಗೊಳಿಸಲಾಗುವುದು. ವಿಡಿಯೋ, ಆನ್ಲೈನ್ ಆಧಾರಿತ ಪ್ರಾತ್ಯಕ್ಷಿಕೆಗಳ ಮೂಲಕ ಪಾಠಗಳನ್ನು ಕಲಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ 833 ವಸತಿ ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಪ್ರತಿ ವಸತಿ ಶಾಲೆಯಲ್ಲೂ ಕನಿಷ್ಠ ಒಂದು ಕೊಠಡಿಯನ್ನು ಸ್ಮಾರ್ಟ್ ತರಗತಿಗೆ ಸಜ್ಜುಗೊಳಿಸಲಾಗುವುದು. ವಿಡಿಯೋ, ಆನ್ ಲೈನ್ ಆಧಾರಿತ ಪ್ರಾತ್ಯಕ್ಷಿಕೆಗಳ ಮೂಲಕ ಪಾಠಗಳನ್ನು ಕಲಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.