ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1 ಸಾವಿರ ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಎಂಎಫ್ ಸಿ ನ್ಯಾಯಾಲಯಗಳ ಮಾದರಿಯಲ್ಲಿ ಗ್ರಾಮ ಮಟ್ಟದಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಶೀಘ್ರವೇ ಹೊಸ ನಿಯಮಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 1,000 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರೂಪರೇಷೆ ಸಿದ್ದಪಡಿಸಲಾಗುತ್ತದೆ.ಬಳಿಕ ಕಾನೂನು ತಜ್ಞರ ಸಲಹೆ, ಅಭಿಪ್ರಾಯ ಸಂಗ್ರಹಿಸಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.