ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೋಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಆವಿಷ್ಕಾರ ನಿಧಿ ಯೋಜನೆಯಡಿ 5 ಕೋಟಿ ರೂ. ನೆರವು ನೀಡುವುದಾಗಿ ಘೋಷಿಸಿದೆ.
ಈ ಕುರಿತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ನವೋದ್ಯಮಗಳ ಆವಿಷ್ಕಾರಗಳನ್ನು ಉತ್ತೇಜಿಸಲು ‘ಎಲಿವೇಟ್ ಕರ್ನಾಟಕ’ ಮಾದರಿಯಲ್ಲೇ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕವಾಗಿ ಪೂರಕವಾದ ಪರಿಣಾಮ ಬೀರುವಂತಹ ‘ಗ್ರಾಮೀಣ ಆವಿಷ್ಕಾರ ನಿಧಿ’ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ ಒಳಗೊಂಡಂತೆ ಗ್ರಾಮೀಣ ಪ್ರದೇಶಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಯಾವುದೇ ಸ್ಟಾರ್ಟಪ್ ಗೆ ಉದ್ದೇಶಿತ ಗ್ರಾಮೀಣ ಆವಿಷ್ಕಾರ ನಿಧಿ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.