ಬೆಂಗಳೂರು : ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲು ಮುಂದಾಗಿದೆ.
ಗ್ರಾಮ ನ್ಯಾಯಾಲಯ ಸ್ಥಾಪನೆ ಸಂಬಂದ 2008 ರಲ್ಲಿ ಕೇಂದ್ರ ಸರ್ಕಾರ ಕಾಯಿದೆ ತಂದಿದ್ದು, ರಾಜ್ಯದಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲು ಮುಂದಾಗಿದೆ.
ನ್ಯಾಯದಾನ ಪ್ರಕ್ರಿಯೆ ಸರಳೀಕರಣ ಮತ್ತು ಎಲ್ಲ ಹಂತದಲ್ಲಿ ಉನ್ನತ ನ್ಯಾಯಾಲಯಕ್ಕೆ ತೆರಳವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ನ್ಯಾಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.