ಕೊಪ್ಪಳ : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ತ್ವರಿತ ನ್ಯಾಯಕ್ಕಾಗಿ 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲೇ 100 ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು. ಗ್ರಾಮ ನ್ಯಾಯಾಲಯಗಳಿಂದ ನ್ಯಾಯಾದಾನ ವ್ಯವಸ್ಥೆಗೆ ವಿಶೇಷ ಬಲ ಬರಲಿದ್ದು, ಪ್ರಕರಣದ ಇತ್ಯರ್ಥ ವಿಳಂಬ ತಪ್ಪಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಗ್ರಾಮ ನ್ಯಾಯಾಲಯ ಸ್ಥಾಪನೆ ಯೋಜನೆಯನ್ನು 2008 ರಲ್ಲೇ ರೂಪಿಸಲಾಗಿತ್ತು. ಆಗ 2 ನ್ಯಾಯಾಲಯಗಳನ್ನಷ್ಟೇ ಆರಂಭಿಸಲಾಗಿತ್ತು. ಇದೀಗ ರಾಜ್ಯಾದ್ಯಂತ 100 ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.