ಬೆಂಗಳೂರು : ಕುಡಿಯುವ ನೀರಿನ ಸಮಸ್ಯೆ ಇರುವ ರಾಜ್ಯದ ಕೆಲವು ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರಕಾರವು 6.41 ಕೋಟಿ ರೂ. ಹಣ ಬಿಡುಗಡೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆಯಿಂದ 5.14 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಮೂಲಕ ಈ ಹಿಂದೆ ಒದಗಿಸಿದ್ದ 1 ಕೋಟಿ ರೂ. ಸೇರಿ ಸರ್ಕಾರ ಒಟ್ಟು 6.14 ಕೋಟಿ ರೂ. ನೀಡಿದಂತಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು , ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಕುಡಿಯುವ ನೀರಿನ ಅಭಾವ ಇರುವ 514 ಹಳ್ಳಿಗಳಿಗೆ 254 ಟ್ಯಾಂಕರ್ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುವುದು ಎಂದು ಹೇಳಿದ್ದಾರೆ.