ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ ಸೇರಿದಂತೆ 44 ಸೇವೆಗಳು ಇನ್ಮುಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಿಗಲಿವೆ.
ಹೌದು, ರಾಜ್ಯ ಸರ್ಕಾರವು ಗ್ರಾಮೀಣ ಜನರ ಅಲೆದಾಟಕ್ಕೆ ಬ್ರೇಕ್ ಹಾಕಲು ಮಹತ್ವದ ಕ್ರಮ ಕೈಗೊಂಡಿದ್ದು, ಗ್ರಾಮಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಸೇವೆಗಳನ್ನು ಆರಂಭಿಸಲು ಮುಂದಾಗಿದೆ.
ಗ್ರಾಮೀಣ ಜನರಿಗೆ ಒಂದೇ ಸೂರಿನಡಿ ನಾನಾ ಸೇವೆ ಒದಗಿಸಲು 2016 ರಲ್ಲಿ ಗ್ರಾಮಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿತ್ತು. ಗಾಂಧಿ ಜಯಂತಿ ದಿನವಾದ ಅಕ್ಟೋಬರ್ 2 ರಂದು ಹೊಸದಾಗಿ 44 ಸೇವೆಗಳನ್ನು ಆರಂಭಿಸಲಾಗಿದೆ.