ಕಲಬುರಗಿ : ಗ್ರಾಮೀಣ ಭಾಗದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಸಿಲು ಓದಲು ಅನುಕೂಲವಾಗುವಂತೆ ಪ್ರತಿಯೊಂದು ಗ್ರಾಪಂಚಾಯಿತಿಗಳಲ್ಲಿ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮೀಣ ಭಾಗದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಓದಲು ಅನುಕೂಲವಾಗುವಂತೆ ಪ್ರತಿಯೊಂದು ಗ್ರಾಮಪಂಚಾಯತಿಗಳಲ್ಲಿ ₹ 28 ಲಕ್ಷ ವೆಚ್ಚದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಬೇಕಾಗುವ ಪುಸ್ತಕಗಳನ್ನು ವಿತರಿಸುವುದು ಸೇರಿದಂತೆ ಓದಿಗೆ ಅನುಕೂಲವಾಗುವಂತ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಉಪಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಕಟ್ಟುನಿಟ್ಟಿನ ಜಾರಿಗೆ ಅಡ್ಡಿಯಾಗುವ ತೊಂದರೆಗಳನ್ನು ಪಕ್ಷದ ಕಾರ್ಯಕರ್ತರು ಪರಿಹರಿಸಿ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಹೇಳಿದ್ದಾರೆ.