ಮಡಿಕೇರಿ : (2023-24) ಸಾಲಿಗೆ ಹಿಂದುಳಿದ ವರ್ಗಗಳ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಸೌಲಭ್ಯ ಒದಗಿಸಲು ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವ ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in, ಗ್ರಾಮ ಒನ್ https://gramaone.karnataka.gov.in, ಬೆಂಗಳೂರು ಒನ್ https://www.karnatakaone.gov.in ಹಾಗೂ ಕರ್ನಾಟಕ ಒನ್ https://klapp.karnatakaone.gov.in ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿ ವೇಳೆಯಲ್ಲಿ ಅಥವಾ ದೂ.ಸಂ.08272-221656 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.