ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಆಸಕ್ತ ಅರ್ಹ ಸಮುದಾಯದವರು ಆ.31ರೊಳಗಾಗಿ ಸೇವಾ ಸಿಂಧು ತಂತ್ರಾಂಶದ ವೆಬ್ಸೈಟ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
*ಸ್ವಯಂ ಉದ್ಯೋಗ ಸಾಲ ಯೋಜನೆ:
ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿದ್ದು, ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷವರೆಗೆ ಆರ್ಥಿಕ ನೆರವು, ರೂ.1 ಲಕ್ಷವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ ರೂ20 ಸಾವಿರ ಸಹಾಯಧನ ಹಾಗೂ ರೂ.1.1ಲಕ್ಷದಿಂದ ರೂ.2 ಲಕ್ಷದವರೆಗೆ ಶೇ.15 ರಷ್ಟು ಕನಿಷ್ಠ ರೂ.20 ಸಾವಿರವರೆಗೆ ಗರಿಷ್ಠ ರೂ.30 ಸಾವಿರ ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ.
*ಗಂಗಾ ಕಲ್ಯಾಣ ನೀರಾವರಿ ಯೋಜನೆ:*
ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನಾಂಗದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.
*ಅರಿವು-ಶೈಕ್ಷಣಿಕ ಸಾಲ ಯೋಜನೆ*:
ಅಭ್ಯರ್ಥಿ ಸಿಇಟಿ ಮತ್ತು ನೀಟ್ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ ರೂ 5 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು.
*ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ:
ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿದ್ದು,
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟçಲ್ ಮತ್ತು ಮಾಸ್ಟರ್ ಡಿಗ್ರಿ ಇಂಜಿನಿಯರಿAಗ್, ಟೆಕ್ನಾಲಜಿ, ಮ್ಯಾನೇಜ್ಮೆಂಟ್, ಕಾಮರ್ಸ್, ಸೈನ್ಸ್, ಟೆಕ್ನಾಲಜಿ, ಅಗ್ರಿಕಲ್ಚರ್, ಅಲೈಡ್ ಸೈನ್ಸಸ್, ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್, ಸೋಸಿಯಲ್ ಸೈನ್ಸಸ್ ವ್ಯಾಸಂಗಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
ಕ್ಯೂಎಸ್ ವಿಶ್ವ ರ್ಯಾಂಕಿಂಗ್ 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 10 ಲಕ್ಷ ಹಾಗೂ ಪೂರ್ಣ ಕೋರ್ಸ್ ಅವಧಿಗೆ ರೂ.20 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ, ಜಾಮೀನುದಾರ, ಅಥವಾ ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.
*ಸ್ವಾವಲಂಬಿ ಸಾರಥಿ ಯೋಜನೆ:*
ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ ಗಳಿಂದ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ ರೂ.3 ಲಕ್ಷ ಸಹಾಯಧನ ಮಂಜೂರು ಮಾಡಲಾಗುತ್ತದೆ. ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
*ಸ್ವಯಂ ಉದ್ಯೋಗ ಸಾಲ ಯೋಜನೆ
ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1 ಲಕ್ಷ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಸಾಲ ಒದಗಿಸಲಾಗುತ್ತದೆ.ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ