ಬೆಂಗಳೂರು: ದಲಿತರ ಜಮೀನು ಹಕ್ಕು (Land Rights of Dalits) ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸಕ್ಷಮ ಪ್ರಾಧಿಕಾರಗಳಿಗೆ ದೂರು ಸಲ್ಲಿಸಲು ಯಾವುದೇ ಕಾಲಮಿತಿ ವಿಧಿಸದಂತೆ ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿ.ಟಿ.ಸಿ.ಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಹಿನ್ನೆಲೆಯಲ್ಲಿ ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
ಪ.ಜಾತಿ/ಪ.ಪಂಗಡದವರಿಗೆ ಸರ್ಕಾರದಿಂದ ಮಂಜೂರಾದ ಜಮೀನುಗಳು ಅನಧಿಕೃತವಾಗಿ ಪರಭಾರೆ ಆಗಿದ್ದಲ್ಲಿ, ಸಕ್ಷಮ ಪ್ರಾಧಿಕಾರಗಳಿಗೆ ದೂರು ಸಲ್ಲಿಸಲು ಯಾವುದೇ ಕಾಲಮಿತಿ ವಿಧಿಸದಂತೆ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕೆಲವು ಭೂಮಿಗಳ ವರ್ಗಾವಣೆ ನಿಷೇಧ ತಿದ್ದುಪಡಿ ವಿಧೇಯಕ (ಪಿಟಿಸಿಲ್ ತಿದ್ದುಪಡಿ ಮಸೂದೆ) – 2023 ದ ಮೂಲಕ ತಿದ್ದುಪಡಿ ತರಲಾಗಿದೆ.