ಬೆಂಗಳೂರು : ಎಸ್ ಸಿ, ಎಸ್ ಟಿ ಸಮುದಾಯಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯಲ್ಲಿ ಐಎಎಸ್ ಹಾಗೂ ಐಆರ್ಎಸ್ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ದೆಹಲಿಯಲ್ಲಿ ಎಸ್ಸಿ ಹಾಗೂ ಎಸ್ಟಿ ಸಮುದಾಯದ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಈ ಹಾಸ್ಟೆಲ್ನಲ್ಲಿ ದಾಖಲಾಗುವ ಮಕ್ಕಳಿಗೆ ತಿಂಗಳಿಗೆ 15 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಸರ್ಕಾರವೇ ನೀಡಲಿದೆ. ಈ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಸ್ಥಾಪನೆಯಾಗಲಿದ್ದು. ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.