
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ | ಕೆ.ಎ.ಎಸ್ / ಗ್ರೂಪ್ ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2023-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ / ಕೆ.ಎ.ಎಸ್ / ಗ್ರೂಪ್ -ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಯು.ಪಿ.ಎಸ್.ಸಿ / ಕೆ.ಎ.ಎಸ್ / ಗ್ರೂಪ್ -ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (K.E.A) Karnataka Examination Authority OO FLOUT HOWTOR’S ಪ್ರವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯ ವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.
ಯು.ಪಿ.ಎಸ್.ಸಿ/ ಕೆ.ಎ.ಎಸ್ / ಗ್ರೂಪ್ -ಸಿ / ಬ್ಯಾಂಕಿಂಗ್ / ಎಸ್.ಎಸ್.ಸಿ / ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿದೆ.








