2023-24 ನೇ ಸಾಲಿಗೆ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಸೇನೆ / ಭದ್ರತಾ ಪಡೆ / ರಾಜ್ಯ ಪೊಲೀಸ್ ಸೇವೆ ಹಾಗೂ ಇತರೆ ಸರ್ಕಾರಿ ಸಮವಸ್ತ್ರ, (Uniformed Services) ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸೂಚನೆಗಳು
1. ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು.
2. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು.
3.ಕುಟುಂಬದ ವಾರ್ಷಿಕ ಆದಾಯ ರೂ.5.00 ಲಕ್ಷ ಮೀರಿರಬಾರದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್-ಲೈನ್ ಅರ್ಜಿಯನ್ನು ಸಲ್ಲಿಸಲು www.sw.kar.nic.in .
ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವೇಳೆ ತಾಂತ್ರಿಕವಾಗಿ ಸಮಸ್ಯೆಗಳು ಕಂಡು ಬಂದರೆ ದೂರವಾಣಿ ಸಂಖ್ಯೆ : 9482300400 / 9480843005 / 080-22207784 ಸಂಪರ್ಕಿಸುವುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10.12.2023 ಆಗಿದೆ. 250 ಅಭ್ಯರ್ಥಿಗಳಂತೆ 4 ಬ್ಯಾಚ್ ಗಳಲ್ಲಿ ತರಬೇತಿ ಸಂಸ್ಥೆ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿ ನೀಡಲು ನಿಗಧಿಪಡಿಸಿದ ತರಬೇತಿ ಸಂಸ್ಥೆಯ ನೇತೃತ್ವದಲ್ಲಿ ನಡೆಸಲಾಗುವ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಷರತ್ತಿಗೊಳಪಟ್ಟು ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು. ಅಂತಿಮ ఆయే ತರಬೇತಿ ನೀಡುವ ಸಂಸ್ಥೆಯದ್ದಾಗಿರುತ್ತದೆ.
ಮೊದಲು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಹಂತ ಹಂತವಾಗಿ ತರಬೇತಿಗೆ ನಿಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.