alex Certify SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://ssp.karnataka.gov.in ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ, ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...