ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ (State Board, CBSC, ICSC), ಮೆಟ್ರಿಕ್ ನಂತರದ ಪ್ರೋತ್ಸಾಹ ಧನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ (State Board) ವಿದ್ಯಾರ್ಥಿಗಳು ಹಿಂದಿನ ಸಾಲಿನ ಪ್ರೋತ್ಸಾಹ ಧನಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವುಂತಿರಲಿಲ್ಲ. ಪ್ರಸಕ್ತ ಸಾಲಿಗೆ ಎಸ್.ಎಸ್.ಎಲ್.ಸಿ (State Board, CBSC, ICSC) ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swdservices.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯನ್ನು ಹಾಗೂ ಅಗತ್ಯ ದಾಖಲಾತಿಗಳಿಗೆ ಸಂಬಂಧ ಪಟ್ಟ ಶಾಲಾ ಕಾಲೇಜಿನ ಪ್ರಾಂಶುಪಾಲರ ಸಹಿ ಹಾಗೂ ಮೊಹರನ್ನು ಪಡೆದು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು ಅಥವಾ ದೂರವಾಣಿ ಸಂಖ್ಯೆ: 080-29535045 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಪೂರ್ವ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.