ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ನೂತನ ಪ್ರೋತ್ಸಾಹಧನ ತಂತ್ರಾಂಶದಲ್ಲಿ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು/ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿರುವ /ಮಾಡುತ್ತಿರುವ ಹಾಗೂ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ನೂತನ ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಹಾಗೂ ಕಾಲೇಜು /ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿರುವ / ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ಅರ್ಹ ವಿದ್ಯಾರ್ಥಿಗಳಿಗೆ ನೂತನ ಪ್ರೋತ್ಸಾಹಧನ ತಂತ್ರಾಂಶ https://swdservices.karnataka.gov.in ದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.20/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051., ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು, ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29535045, 9480843049., ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್, ಬಸ್ ಸ್ಟ್ಯಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ:080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.