![](https://kannadadunia.com/wp-content/uploads/2023/06/madhu-bangarappa-01.jpg)
ಮೈಸೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಯ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ನೀಡಲಾಗುವುದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕ್ಷೀರ ಭಾಗ್ಯ ಜಾರಿಯಲ್ಲಿದ್ದು ಇದೇ ಹಾಲಿಗೆ ರಾಗಿ ಮಾಲ್ಟ್ ಹಾಕಿ ಕೊಡುತ್ತೇವೆ, ಇನ್ನು ವಾರದಲ್ಲಿ ಒಂದು ದಿನ ಮೊಟ್ಟೆ ನೀಡಲಾಗುತ್ತಿದೆ. ಇನ್ಮುಂದೆ ಎರಡು ಮೊಟ್ಟೆ ವಿತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ನವೆಂಬರ್ ತಿಂಗಳಿಂದ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ಪೂರೈಸಲಾಗುವುದು. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರು ನೀಡಿದರೆ, ವಿದ್ಯಾರ್ಥಿಗಳಿಗೆ, ಶಿಕ್ಷಕರುಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.