alex Certify ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬ್ಯಾಗ್ ಹೊರೆʼ ಇಳಿಸಲು ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಬ್ಯಾಗ್ ಹೊರೆʼ ಇಳಿಸಲು ಮಹತ್ವದ ಕ್ರಮ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ, ಬ್ಯಾಗ್‌ ಹೊರೆ ತಗ್ಗಿಸುವ ನಿಟ್ಟಿಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಪ್ರಸಕ್ತ ವರ್ಷದಿಂದ ಪಠ್ಯಪುಸ್ತಕಗಳು ಭಾಗ-1 ಮತ್ತು ಭಾಗ-2 ಎಂದು ಎರಡು ವಿಭಾಗಗಳಾಗಿ ಮುದ್ರಿಸಿ ಸರಬರಾಜು ಮಾಡಲು ಇಲಾಖೆ ತೀರ್ಮಾನ ಮಾಡಿದೆ . ಅರ್ಧವಾರ್ಷಿಕ ಪರೀಕ್ಷೆ ವರೆಗೆ ಭಾಗ-1 ಹಾಗೂ ದಸರಾ ರಜೆ ಮುಗಿದ ಬಳಿಕ ಭಾಗ-2 ಪಠ್ಯಪುಸ್ತಕಗಳನ್ನು ವಿತರಣೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಪಠ್ಯಪುಸ್ತಕ ವಿಭಜಿಸಿ ನೀಡುವುದರಿಂದ ಮಕ್ಕಳ ಶಾಲಾ ಬ್ಯಾಗ್ ತೂಕ ಕಡಿಮೆಯಾಗಲಿದೆ. ನಿರ್ವಹಣೆ ಸುಲಭವಾಗುತ್ತದೆ. ಮಕ್ಕಳ ಒತ್ತಡ ಇಳಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ನೂತನ ಯೋಜನೆ ಜಾರಿಗೊಳಿಸಲಿದ್ದು, ಪುಸ್ತಕಗಳ ಮುದ್ರಣ ವೆಚ್ಚ ಅಂದಾಜು 10 ಕೋಟಿ ರೂಪಾಯಿಯಷ್ಟು ಹೆಚ್ಚಾಗಬಹುದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...