ಬೆಂಗಳೂರು : ಹಳೆಯ ಪಿಂಚಣಿ ಯೋಜನೆ ಜಾರಿಯ ನಿರೀಕ್ಷೆಯಲ್ಲಿರುವ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೊಸ ಪಿಂಚಣಿ ಯೋಜನೆ (NPS) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (OPS) ಜಾರಿಗೊಳಿಸುವ ಸಂಬಂಧ ಪರಿಶೀಲನೆ ನಡೆಸಿ ಕ್ರಮ ವಹಿಸುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.
2006 ರ ಏಪ್ರಿಲ್ 1 ಕ್ಕಿಂತ ಮೊದಲು ಅಧಿಸೂಚನೆಹೊರಡಿಸಿ ಸೇವೆಗೆ ಸೇರಿದ ಶಿಕ್ಷಕರಿಗೆ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಎನ್ ಪಿಸ್ ಯೋಜನೆಯಡಿ ಶಿಕ್ಷಕರು ನಿವೃತ್ತಿ ಹೊಂದಿ ಕನಿಷ್ಠ ಪಿಂಚಣಿ ಇಲ್ಲದೆ ದಯನೀಯ ಜೀವನ ನಡೆಸುತ್ತಿರುವ ಶಿಕ್ಷಕರ ಬದುಕಿಗೆ ನ್ಯಾಯ ಒದಗಿಸಲು ಎನ್ ಪಿಎಸ್ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಕೋರಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಪರಿಶೀಲನೆ ನಡೆಸಿ ಕ್ರಮ ವಹಿಸುವಂತೆ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.