ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ.
ಹೌದು. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ವೋ ಬಸ್ ಬಿಟ್ಟು ಉಳಿದ ಎಲ್ಲಾ ಬಸ್ ಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡಬಹುದಾಗಿದೆ. ವಿದ್ಯಾರ್ಥಿಗಳು ಪ್ರಯಾಣದ ಸಮಯದಲ್ಲಿ ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣ ಮಾಡಬಹುದು.
ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು, ಅಲ್ಲದೇ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ.
01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 : ಸೋಮವಾರ ಗಣಿತ
05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ
07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ
09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 : ಇಂಗ್ಲಿಷ್ ಪರೀಕ್ಷೆ
15-03-2024 : ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 : ಅರ್ಥಶಾಸ್ತ್ರ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
22-03-2024 : ಹಿಂದಿ ಪರೀಕ್ಷೆ