ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಹಿರಿಯ ನಾಗರಿಕರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸಹಾಯ ಹಸ್ತ ವೈಬ್ ಸೈಟ್ ಪ್ರಾರಂಭಿಸಲು ಮುಂದಾಗಿದೆ.
ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರು ನಗರದ ಹಿರಿಯ ನಾಗರಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಹಿನ್ನೆಲೆಯಲ್ಲಿ ಡಿಸಿಎಂ ಕಚೇರಿಯಲ್ಲಿ ‘ಸಹಾಯ ಹಸ್ತ’ ವೆಬ್ಸೈಟ್ ಪ್ರಾರಂಭಿಸಲಾಗುತ್ತದೆ. ವೆಬ್ಸೈಟ್ ಮೂಲಕ ಸಮಸ್ಯೆಗಳನ್ನು ತಿಳಿಸಬಹುದು. ವೆಬ್ ಸೈಟ್ ನಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ.
ಇದರ ನಿವಾರಣೆಗೆ ಪ್ರತ್ಯೇಕ ತಂಡ ಕೆಲಸ ಮಾಡಲಿದ್ದು, ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬ್ರ್ಯಾಂಡ್ ಬೆಂಗಳೂರು ಸಮ್ಮೇಳನದಲ್ಲಿ ಹೇಳಿದರು.