ಬೆಂಗಳೂರು : ಕೊಳಗೇರಿ ನಿವಾಸಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊಳಗೇರಿ ನಿಗಮದ ಎಸ್ ಸಿಎಸ್ ಪಿ/ಟಿಎಸ್ ಪಿ ಫಲಾನುಭವಿಗಳ ಅನುದಾನವನ್ನು 1 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
ಎಸ್ ಸಿಎಸ್ ಪಿ/ಟಿಎಸ್ ಪಿ ಅನುದಾನ ಬಳಕೆಯ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಎಸ್ ಸಿಎಸ್ ಪಿ/ಟಿಎಸ್ ಪಿ ಫಲಾನುಭವಿಗಳಿಗೆ ಈವರೆಗೆ ಇದ್ದ 75,000 ರೂ. ಅನುದಾನವನ್ನು 1 ಲಕ್ಷ ರೂ.ಗೆ ಏರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆಯಡಿ ಎರಡು ಹಸುಗಳನ್ನು ನೀಡುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದು, ಪಶುಭಾಗ್ಯ ಯೋಜನೆಯ ಪ್ರಸ್ತಾವನೆಗೆ ಅನುಮೋದನೆ ಪಡೆದು ಕಾರ್ಯ ನಿರ್ವಹಿಸುವುದಾಗಿ ಅಧಿಕಾರಿಗಳು ತಿಳಿಸಿದರು.