alex Certify ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿ 2022ನೇ ಸಾಲಿನ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಕ್ರಿಡಾಪಟುಗಳು ಅರ್ಜಿ ನಮೂನೆಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17&18, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು ಇಲ್ಲಿ ಪಡೆದು ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 07 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7204266766, 9480886545 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...