![](https://kannadadunia.com/wp-content/uploads/2024/02/Athletes.jpg)
ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆ ನಿರ್ಧರಿಸಿತು.