ಬೆಂಗಳೂರು : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ಬೆಂಗಳೂರು ವೃತ್ತ : 33
ಬೆಳಗಾವಿ ವೃತ್ತ : 20
ಬಳ್ಳಾರಿ ವೃತ್ತ: 20
ಚಾಮರಾಜನಗರ ವೃತ್ತ: 32
ಚಿಕ್ಕಮಗಳೂರು ವೃತ್ತ: 25
ಧಾರವಾಡ ವೃತ್ತ: 7
ಹಾಸನ ವೃತ್ತ: 20
ಕೆನರಾ ವೃತ್ತ: 32
ಕೊಡಗು ವೃತ್ತ: 16
ಕಲಬುರ್ಗಿ ವೃತ್ತ: 23
ಮಂಗಳೂರು ವೃತ್ತ: 20
ಮೈಸೂರು ವೃತ್ತ: 32
ಶಿವಮೊಗ್ಗ ವೃತ್ತ: 30
ಒಟ್ಟು : 310
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್ಸೈಟ: https://arayan.gov.in/ ಮುಖಾಂತರ ಅಕ್ಟೋಬರ್ 26, 2023 ರೊಳಗೆ ಸಲ್ಲಿಸಬೇಕು.ಹಾಗೂ ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ಆನ್ ಲೈನ್ ಹೊರತುಪಡಿಸಿ ಬೇರೆ ಯಾವುದೇ ಮೂಲಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ವಿದ್ಯಾರ್ಹತೆ:
ಮಾನ್ಯತೆ ಪಡೆದಿರುವ ಯಾವುದೇ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಉತ್ತೀರ್ಣರಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ:- ರೂ.18,000 ದಿಂದ ರೂ.32,600
1)SC / ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 120ರೂ.
2) OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 220ರೂ.
3) ಅರ್ಜಿ ಶುಲ್ಕವನ್ನು ಅಂಚೆ ಇಲಾಖೆಯ ಇ-ಚಲನ್ ಮೂಲಕ ಪಾವತಿಸಬೇಕು.
ವಯೋಮಿತಿ:-
1) ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
2)ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು.
3) OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು.
4) SC / ST, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು
ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್ ಸೈಟ್ ಆದ aranya.gov.in ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬೇಕು.ಅರ್ಜಿ ಫಾರಂ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿವರಗಳನ್ನು ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿಯನ್ನು ಪಡೆದುಕೊಳ್ಳಬೇಕು.
ಲಿಖಿತ ಪರೀಕ್ಷೆ, ದೈಹಿಕ ಪರೀಕ್ಚೆ, ವೈದ್ಯಕೀಯ ಪರೀಕ್ಷೆ, ಸಂದರ್ಶನ, ದಾಖಲೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಪಾವತಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.