ಗ್ರಾಮೀಣಾಭಿವೃದ್ಧಿಗೆ ಮೀಸಲಾಗಿರುವ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್ ನಬಾರ್ಡ್ (NABARD) ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ನಬಾರ್ಡ್ 108 ಆಫೀಸ್ ಅಸಿಸ್ಟೆಂಟ್ (ಗ್ರೂಪ್ ‘ಸಿ’) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಬಾರ್ಡ್ನ ಅಧಿಕೃತ ವೆಬ್ಸೈಟ್ nabard.org ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮೊದಲು, ಅಭ್ಯರ್ಥಿಗಳು ಅಗತ್ಯವಿರುವ ಮಾಹಿತಿಯನ್ನು ಎಚ್ಚರಿಕೆಯಿಂದ ಓದಬೇಕು ಅರ್ಜಿ ಶುಲ್ಕ ಮತ್ತು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 15 ವರ್ಷಗಳ ರಕ್ಷಣಾ ಸೇವೆ ಹೊಂದಿರುವ ಮಾಜಿ ಸೈನಿಕರಿಗೆ 10 ನೇ ತರಗತಿ ಪಾಸ್ ಕಡ್ಡಾಯವಾಗಿದೆ, ಆದರೆ ಇದು ಸಶಸ್ತ್ರ ಪಡೆಗಳನ್ನು ತೊರೆದ ನಂತರ ಪದವಿ ಪಡೆಯದವರಿಗೆ ಮಾತ್ರ ಅನ್ವಯಿಸುತ್ತದೆ.
ವಯೋಮಿತಿ
ನಬಾರ್ಡ್ ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 30 ವರ್ಷಗಳು. ಸರ್ಕಾರದ ನಿಯಮಗಳ ಪ್ರಕಾರ, ವಿವಿಧ ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಮತ್ತು ಅಭ್ಯರ್ಥಿಗಳು ಈ ನೇಮಕಾತಿ ಡ್ರೈವ್ಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸಂಬಳ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000 ರೂ. ನೀಡಲಾಗುವುದು.
ಅರ್ಜಿ ಶುಲ್ಕ
ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಕೇವಲ ರೂ. 150. ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು ರೂ. 500 ಪಾವತಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.