ಮೈಸೂರು : ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ‘ಮಾರ್ಕ್ಸ್ ಕಾರ್ಡ್’ ನಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ‘ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ ಪರೀಕ್ಷೆ ಇರಲಿದೆ. ಆದರೆ, ಮಾರ್ಕ್ಸ್ ಕಾರ್ಡ್ ನೀಡುವಾಗ ಸಪ್ಲಿಮೆಂಟರಿ ಎಂದು ನಮೂದಿಸಲ್ಲ ಎಂದು ಹೇಳಿದರು. ಹಾಗೂ ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರಿ ಶಾಲೆಗಳ ಉನ್ನತೀಕರಣಗೊಳಿಸಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್
ರಾಜ್ಯದ ಶಾಲಾ ಮಕ್ಕಳಿಗೆ ಇನ್ಮುಂದೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ ಸಚಿವ ಮಧು ಬಂಗಾರಪ್ಪ ಹೇಳಿದರು.ಈಗಾಗಲೇ ಕ್ಷೀರಭಾಗ್ಯ ಯೋಜನೆ ಜಾರಿಯಲ್ಲಿದೆ. ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲು ಚಿಂತನೆ ನಡೆಸಿದ್ದೇವೆ, ಶೀಘ್ರದಲ್ಲೇ ಯೋಜನೆ ಜಾರಿಗೆ ತರಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.