ಬೆಂಗಳೂರು : ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಅಂಕಪಟ್ಟಿ ತಿದ್ದುಪಡಿಗೆ ಶಾಲೆಗಳಲ್ಲೇ ಅವಕಾಶ ನೀಡಿದೆ.
ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವಿದ್ಯಾರ್ಥಿ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ. ಇದರಿಂದ ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅಂಕಪಟ್ಟಿ ತಿದ್ದುಪಡಿಗಾಗಿ ಬೆಂಗಳೂರಿನ ಕೇಂದ್ರ ಕಚೇರಿ ಅಥವಾ ಮಂಡಳಿಯ ವಿಭಾಗೀಯ ಕಚೇರಿಗೆ ಭೇಟಿ ನೀಡಬೇಕಾದ ಅವಶ್ಯಕತೆಯಿಲ್ಲ. ತಾವು ಓದಿದ ಪ್ರೌಢಶಾಲೆಯಲ್ಲೇ ಸೌಲಭ್ಯ ಪಡೆಯಬಹುದಾಗಿದೆ.
ಕರ್ನಾಟಕ ಶಾಲಾ ಪರೀ್ಕಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿ ಸ್ನೇಹಿ ತಂತ್ರಾಂಶ ಅಭಿವೃದ್ಧಿ ಪಡಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ತಿದ್ದುಪಡಿ ಪ್ರಸ್ತಾಪ ಸಲ್ಲಿಸಲು ಅನುಕೂಲವಾಗುವಂತೆ ಲಾಗಿನ್ ಸೌಲಭ್ಯ ಕಲ್ಪಿಸಿದೆ. ವಿದ್ಯಾರ್ಥಿಗಳು ಕೋರಿಕೆ ಸಲ್ಲಿಸಿದ ಒಂದು ವಾರದಲ್ಲೇ ಪರಿಷ್ಕೃತ ಅಂಕಪಟ್ಟಿ ಸಿಗಲಿದೆ
ಅಂಕಪಟ್ಟಿಯಲ್ಲಿ ವಿದ್ಯಾರ್ಥಿಯ ಹೆಸರು, ತಾಯಿ-ತಂದೆ ಹೆಸರು ಜನ್ಮದಿನಾಂಕ ಸೇರಿದಂತೆ ಯಾವುದಾದರೂ ತಪ್ಪುಗಳಿದ್ದರೆ ತಾವು ಓದಿದ ಶಾಲೆಗೆ ತೆರಳಿ ಅಗತ್ಯವಾದ ಪೂರಕ ದಾಕಲೆಗಳನ್ನು ಸಲ್ಲಿಸಿದರೆ ಶಾಲೆಗಳಲ್ಲೇ ತಿದ್ದುಪಡಿ ಮಾಡಿದ ಅಂಕಪಟ್ಟಿ ಸಿಗಲಿದೆ.