ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ರಾಜ್ಯ ಸ್ಕಾಲರ್ಶಿಪ್ ಪೋರ್ಟಲ್ನ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಸ್ವೀಕೃತಿ ಪ್ರತಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಸಂಬಂಧಿಸಿದ ಕಾಲೇಜು ಪ್ರಾಚಾರ್ಯರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಮೊ.9110224569 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.