ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ( Good news ) ಸಿಕ್ಕಿದ್ದು, ಶೀಘ್ರವೇ ವೇತನ ಶೇ.38ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.
ಈ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸಿನಂತೆ ಶೇ.38ರಿಂದ 40 ವೇತನ ಹೆಚ್ಚಾಗುವ ವಿಶ್ವಾಸವಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ರಚಿಸಿರುವ 7ನೇ ವೇತನ ಆಯೋಗದ ಸಮಿತಿಯು ನವೆಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿ ಸಲ್ಲಿಸಲಿದೆ. ಸಮಿತಿಯ ಸದಸ್ಯರನ್ನು ಶುಕ್ರವಾರ ಭೇಟಿ ಮಾಡಿ ಶೇ.38 ರಿಂದ 40 ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ಕುಟುಂಬಗಳಿಗೆ ಆಸ್ಪತ್ರೆಯಲ್ಲಿ ಕ್ಯಾಶ್ ಲೆಸ್ ಚಿಕಿತ್ಸೆ ಸಿಗುವ ಯೋಜನೆ ಈ ತಿಂಗಳ ಅಂತ್ಯದೊಳಗೆ ಜಾರಿಯಾಗಲಿದೆ ಎಂದರು.