
ಬೆಳಗಾವಿ : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ ಜಾರಿ ಸಂಬಂಧ 10 ದಿನಗಳ ಒಳಗೆ ಎಪಿಎಸ್ ಸಮಿತಿ ಪುನರ್ ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು (ಒಪಿಎಸ್) ಜಾರಿಗೊಳಿಸುವ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಹೆಚ್ಚುವರಿ ಕಾರ್ಯದರ್ಶಿ (ಎಪಿಎಸ್) ಸಮಿತಿಗೆ ಇನ್ನಷ್ಟು ಸದಸ್ಯರನ್ನು ಸೇರಿಸಿ 10 ದಿನಗಳ ಒಳಗೆ ಪುನರ್ ರಚಿಸಲಾಗುವುದು ಹೇಳಿದ್ದಾರೆ.
ಪಿಂಚಣಿ ಯೋಜನೆ (OPS) ಪುನಃ ಜಾರಿಗೆ ತರುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ರಚಿಸಿದ್ದ ಸಮಿತಿಯನ್ನು ಶೀಘ್ರವೇ ಪುನರ್ ರಚಿಸಲಾಗುವುದು ಎಂದು ತಿಳಿಸಿದ್ದಾರೆ.