ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸೆಪ್ಟೆಂಬರ್ 15ರೊಳಗೆ ರಾಜ್ಯಾದ್ಯಂತ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.
ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನದ ಕುರಿತು ಸುವರ್ಣ ಆರೋಗ್ಯ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕರಾದ ಶ್ರೀಮತಿ ವಿನುತ್ ಪ್ರಿಯ ರವರೊಂದಿಗೆ ಚರ್ಚಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು ಸೆಪ್ಟೆಂಬರ್ 15 ರ ಒಳಗಾಗಿ ರಾಜ್ಯಾದ್ಯಂತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಜಾರಿಗೊಳಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯಿಂದ ರಾಜ್ಯದ ಅಂದಾಜು 5 ಲಕ್ಷಕ್ಕೂ ಹಚ್ಚಿನ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಒಂದಕ್ಕೆ ಸರಾಸರಿ 5 ಸದಸ್ಯರಂತೆ ಸುಮಾರು 25 ರಿಂದ 30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅಂದಾಜು ಮಾಡಲಾಗಿದೆ.