alex Certify ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಭರ್ಜರಿ ಸಿಹಿಸುದ್ದಿ : ಶೀಘ್ರವೇ ವೇತನ ಹೆಚ್ಚಳ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸುವ ಸಂಬಂಧ ರಚಿಸಲಾದ 7 ನೇ ವೇತನ ಆಯೋಗ ಸಲ್ಲಿಸಿರುವ ಶಿಫಾರಸುಗಳನ್ನು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬೆಳಕಿನಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

7 ನೇ ವೇತನ ಆಯೋಗದ ವರದಿ ನೀಡಲು 6 ತಿಂಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದು, ಅಂತಿಮ ವರದಿ ಬಂದಬಳಿಕ ಪರಿಶೀಲಿಸಿ ರಾಜ್ಯದ ಆರ್ಥಿಕ ಸ್ಥಿತಿ ನೋಡಿಕೊಂಡು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...