alex Certify ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ `NPS’ ರದ್ದು ಮಾಡಲು ಸರ್ಕಾರ ಸಿದ್ಧತೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ `NPS’ ರದ್ದು ಮಾಡಲು ಸರ್ಕಾರ ಸಿದ್ಧತೆ!

ಬೆಂಗಳೂರು : ಹಳೆಯ ಪಿಂಚಣಿ ಜಾರಿಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಡಿಸೆಂಬರ್ ನಲ್ಲಿ ಎನ್ ಪಿಎಸ್ ರದ್ದು ಮಾಡುವ ಕುರಿತು ಘೋಷಣೆ ಮಾಡಲಿದೆ ಎನ್ನಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಎನ್ ಪಿಎಸ್ ರದ್ದು ಮಾಡುವ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ. ಡಿಸೆಂಬರ್ ನಲ್ಲಿ ಈ ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

2.65 ಲಕ್ಷ ಎನ್ ಪಿಎಸ್ ನೌಕರರು ಹಾಗೂ ಅಷ್ಟೇ ಪ್ರಮಾಣದಲ್ಲಿ ನಿಗಮಗಳಲ್ಲಿರುವ ನೌಕರರು ವಿವಿಧ ಹಂತದ ಹೋರಾಟಗಳ ಮೂಲಕ ಎನ್ ಪಿಎಸ್ ರದ್ದತಿಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎನ್ ಪಿಎಸ್ ರದ್ದತಿಗೆ ಭರವಸೆ ನೀಡಿತ್ತು.

ಎನ್ ಪಿಎಸ್ ನೌಕರರ ಸಮಾವೇಶ ಡಿಸೆಂಬರ್ ನಲ್ಲಿ ನಡೆಯಲಿದ್ದು, ಆ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಲು ನೌಕರರು ಸಿದ್ಧತೆ ಮಾಡಿಕೊಂಡಿದ್ದಾರೆ. ಆ ಸಮಾವೇಶದಲ್ಲಿ ಎನ್ ಪಿಎಸ್ ರದ್ದತಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...