![](https://kannadadunia.com/wp-content/uploads/2021/04/vidhana-soudha-1-800x445-1.jpg)
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ನೌಕರರ ಪ್ರಭಾರ ಭತ್ಯ ದರವನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 32 ಮತ್ತು 68 ರಡಿಯಲ್ಲಿ ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆ ಬೇರೊಂದು ಹುದ್ದೆಯ ಹೆಚ್ಚಿನ ಪ್ರಭಾರದಲ್ಲಿರಿಸಿದಾಗ ಆ ಹುದ್ದೆಯ ವೇತನ ಶ್ರೇಣಿಯ ಕನಿಷ್ಠ ಹಂತದಲ್ಲಿ ಮೂರು ತಿಂಗಳವರೆಗೆ ಶೇಕಡ 7.5 ದರದಲ್ಲಿ, ಆ ನಂತರದ ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಗೆ ಶೇಕಡ 15 ರ ದರದಲ್ಲಿ ಪ್ರಭಾರ ಭತ್ಯೆಯನ್ನು ನಿಗಧಿಪಡಿಸಿ ಆದೇಶಿಸಲಾಗಿತ್ತು.
ಪ್ರಸ್ತುತ, ಸರ್ಕಾರದ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಸುಗಮ ಆಡಳಿತಕ್ಕಾಗಿ ಹಲವಾರು ಸಿಬ್ಬಂದಿಗಳನ್ನು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಲ್ಲಿ ಅಧಿಕ ಪ್ರಭಾರ/ಸಮವರ್ತಿ ಪ್ರಭಾರದಲ್ಲಿರಿಸಲಾಗಿದೆ. ಸದರಿ ಅಧಿಕಾರಿಗಳು ಹೆಚ್ಚಿನ ಕಾರ್ಯಭಾರದ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಈ ಅಧಿಕಾರಿ/ನೌಕರರುಗಳಿಗೆ ಪ್ರಭಾರ ಭತ್ಯೆ ಮಂಜೂರು ಮಾಡಲು ಹಾಲಿ ಅನುಸರಿಸುತ್ತಿರುವ ಕಾರ್ಯವಿಧಾನದ ಜಟಿಲತೆಯಿಂದಾಗಿ ಹಲವು ಸಂದರ್ಭಗಳಲ್ಲಿ ಪ್ರಭಾರ ಭತ್ಯೆ ಪಡೆಯುವುದು ಬಹಳ ಕಷ್ಟಕರವಾಗುತ್ತಿದೆ. ಈ ಕಾರ್ಯವಿಧಾನವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಪ್ರಸ್ತುತ ಎರಡು ಹಂತದಲ್ಲಿ ನೀಡುತ್ತಿರುವ ಪ್ರಭಾರ ಭತ್ಯೆಯನ್ನು ವಿಲೀನಗೊಳಿಸಿ ಒಂದೇ ಹಂತದಲ್ಲಿ ನೀಡುವ ಬಗ್ಗೆ ಸ್ವೀಕೃತವಾದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.
![](https://kannadadunia.com/wp-content/uploads/2024/01/WhatsApp-Image-2024-01-25-at-8.49.56-PM.jpeg)
![](https://kannadadunia.com/wp-content/uploads/2024/01/WhatsApp-Image-2024-01-25-at-8.49.55-PM.jpeg)