alex Certify BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ಮತ್ತೆ ‘ವರ್ಗಾವಣೆ ಅವಧಿ’ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ಮತ್ತೆ ‘ವರ್ಗಾವಣೆ ಅವಧಿ’ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೆ ವರ್ಗಾವಣೆ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ತದನಂತರ, ಮೇಲೆ ಓದಲಾದ (2)ರ ಸರ್ಕಾರಿ ಆದೇಶದಲ್ಲಿ ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಲಾಗಿತ್ತು. ಮುಂದುವರೆದು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ಪರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ.

ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 31.07.2024 ರವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...