ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 10,034 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 2 ಸಾವಿರ ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಹೆಚ್. ಡಿ. ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಡಾ.ಜಿ.ಪರಮೇಶ್ವರ್, ರಾಜ್ಯದಲ್ಲಿ ಪೊಲೀಸ್ ಗೃಹ-2025 ಯೋಜನೆಯಡಿ 29,524 ಪಿಸಿ ವಸತಿ ಗೃಹ, 510 ಪಿಎಸ್ ಐ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ವಸತಿ ಗೃಹಗಳನ್ನು ನಿರ್ಮಿಸಲು 2 ಸಾವಿರ ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಹಲವಡೆ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಬಾಕಿ ಇರುವ ವಸತಿ ಗೃಹಗಳನ್ನು ಬಜೆಟ್ ಅನುದಾನದ ಲಭ್ಯತೆ ಆಧರಿಸಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.