alex Certify ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ‘ಕ್ರೀಡಾ ವಿದ್ಯಾರ್ಥಿ ವೇತನ’ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ‘ಕ್ರೀಡಾ ವಿದ್ಯಾರ್ಥಿ ವೇತನ’ ಪಡೆಯಲು ಸರ್ಕಾರದಿಂದ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕ್ರೀಡಾ ವಿದ್ಯಾರ್ಥಿ ವೇತನ ಪಡೆಯಲು ಸರ್ಕಾರ ಅರ್ಜಿ ಆಹ್ವಾನಿಸಿದೆ.

2024-25ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/- ರಂತ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ನೀಡುವ ಸಂಬಂಧ 2024-25ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ https://sevasindhuservices.karnataka.gov.in ಆನ್ಲೈನ್ನಲ್ಲಿ ದಿನಾಂಕ:01-06-2024 ರಿಂದ 30-06-2024ರವರೆಗೆ ರವರೆಗೆ ಸಲ್ಲಿಸಲು ತಿಳಿಸಲಾಗಿತ್ತು.ಸದರಿ ದಿನಾಂಕವನ್ನು 20-07-2024ರವರೆಗೆ ಮುಂದುವರೆಸಿ ಆದೇಶಿಸಿದೆ. ಈ ಬಗ್ಗೆ ಜಿಲ್ಲೆಗಳಲ್ಲಿ ಅಗತ್ಯ ಕ್ರಮ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ವ್ಯಾಪಕ ಪ್ರಚಾರ ನೀಡಲು ಸೂಚಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...