ಧಾರವಾಡ : 2024-25 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಡಿಸೆಂಬರ 21, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.