alex Certify ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |NMMS Scholarship 2024 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ |NMMS Scholarship 2024

ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೋರ್ಟಲ್ ಆರಂಭ : 30-6-2024
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು/ನವೀಕರಿಸಲು ಅಂತಿಮ ದಿನಾಂಕ : 31-8-2024
ಶಾಲಾ/ ಕಾಲೇಜು ಹಂತದಲ್ಲಿ INO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ : 15-9-2024
ಜಿಲ್ಲಾ ಹಂತದಲ್ಲಿ DNO ಗಳಿಂದ ಅರ್ಜಿ ಪರಿಶೀಲನೆಗೆ ಅಂತಿಮ ದಿನಾಂಕ : 30-9-2024
ಪ್ರಸಕ್ತ ಸಾಲಿನಲ್ಲಿ National Scholarship Portal ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು

ಅನುಸರಿಸಬೇಕಾದ ಪ್ರಮುಖ ಅಂಶಗಳು 

2024-25ನೇ ಸಾಲಿನಲ್ಲಿ Fresh ಹಾಗೂ Renewal ವಿದ್ಯಾರ್ಥಿಗಳು (NSP) ಯಲ್ಲಿ ಅರ್ಜಿಗಳನ್ನು ಸಲ್ಲಿಸಲು One Time Registration (OTR) ಕಡ್ಡಾಯವಾಗಿರುತ್ತದೆ.

*(OTR) is a unique 14-digit number issued based on the Aadhaar/Aadhaar Enrolment ID (EID)
One Time Registration (OTR) ಪ್ರತಿ ವಿದ್ಯಾರ್ಥಿಗೂ ನೀಡಲಾಗುವ ಒಂದು ಅನನ್ಯ (unique) ಸಂಖ್ಯೆಯಾಗಿದ್ದು ಇದು ವಿದ್ಯಾರ್ಥಿಯ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)ನಲ್ಲಿ ಅರ್ಜಿ ಸಲ್ಲಿಸಲು ಅನ್ವಯವಾಗುತ್ತದೆ.

NMMS ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುವ Renewal ವಿದ್ಯಾರ್ಥಿಗಳಿಗೆ NSP ನಲ್ಲಿ ನೊಂದಾಯಿತ ಮೊಬೈಲ್ ಗೆ SMS ಮೂಲಕ Reference / OTR ಕಳುಹಿಸಲಾಗುತ್ತಿದೆ.

Fresh ವಿದ್ಯಾರ್ಥಿಗಳಿಗೆ SMS ಮೂಲಕ Reference ID ಅಥವಾ OTR ಸಂಖ್ಯೆಯನ್ನು ಕಳುಹಿಸಲಾಗುವುದಿಲ್ಲ. ಆದ್ದರಿಂದ NSP ನಲ್ಲಿ ಮೊದಲ ಸಲ ಅರ್ಜಿ ಸಲ್ಲಿಸುತ್ತಿರುವ (Fresh) 2 National Scholarship Portal , Student Login ಲಭ್ಯವಿರುವ “Know your OTR” ಎಂಬ ಆಯ್ಕೆಯನ್ನು ಬಳಸಿ OTR ಅಥವಾ ರಫೆರನ್ಸ್ ಸಂಖ್ಯೆಯನ್ನು ಪಡೆದುಕೊಳ್ಳಬೇಕಾಗುತ್ತದೆ.

2024-25 ನೇ ಸಾಲಿನಲ್ಲಿ NSP ನಲ್ಲಿ ಅರ್ಜಿ ಸಲ್ಲಿಸಲು Face Authentication ಕಡ್ಡಾಯವಾಗಿದ್ದು, ಆಧಾರ್ ನಲ್ಲಿರುವ ಮಾಹಿತಿಗಳನ್ನು ಸರಿಪಡಿಸುವುದರೊಂದಿಗೆ ಇತ್ತೀಚಿನ ಭಾವಚಿತ್ರವನ್ನು ಕಡ್ಡಾಯವಾಗಿ update ಮಾಡಿಸುವುದು. ( ಆಧಾರ್ ನಲ್ಲಿ ಅತಿ ಚಿಕ್ಕ ವಯಸ್ಸಿನ ಫೋಟೊಗಳಿರುವುದರಿಂದ Face authentication Error ಎಂದು ಕಾಣಿಸಿಕೊಳ್ಳುತ್ತದೆ)

ಆಧಾರ್ ಸಂಖ್ಯೆ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯ ದಾಖಲೆಗಳು

ಸಕ್ರಿಯ ಮೊಬೈಲ್ ಸಂಖ್ಯೆ.
ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ.
ವಿದ್ಯಾರ್ಥಿಯ ಆಧಾರ್ ಸಂಖ್ಯೆ,
ಆ) ಆಧಾರ್ ಸಂಖ್ಯೆ ಇಲ್ಲದೇ ಇರುವ ವಿದ್ಯಾರ್ಥಿಗಳು OTR ಪಡೆಯಲು ಅಗತ್ಯವಿರುವ ದಾಖಲೆಗಳು
ಸಕ್ರಿಯ ಮೊಬೈಲ್ ಸಂಖ್ಯೆ
ಪೋಷಕರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ
ವಿದ್ಯಾರ್ಥಿಯು ಆಧಾರ್ ಸಂಖ್ಯೆಗಾಗಿ ಸಲ್ಲಿಸಿದ ಅರ್ಜಿಯ EID ಸಂಖ್ಯೆ.
ಪೋಷಕರ ಆಧಾರ್ ಸಂಖ್ಯೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...