alex Certify ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಶುಭ ಸುದ್ದಿ : ಈ 10 ಹೃದಯ ಸಂಬಂಧಿ `ಉಚಿತ ವೈದ್ಯಕೀಯ ತಪಾಸಣೆ’ಗೆ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಶುಭ ಸುದ್ದಿ : ಈ 10 ಹೃದಯ ಸಂಬಂಧಿ `ಉಚಿತ ವೈದ್ಯಕೀಯ ತಪಾಸಣೆ’ಗೆ ಸುತ್ತೋಲೆ

ಬೆಂಗಳೂರು :ರಾಜ್ಯ ಸರ್ಕಾರವು ಸಾರಿಗೆ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ 10 ಉಚಿತ ಹೃದಯಸಂಬಂಧಿ ತಪಾಸಣೆ ಹಾಗೂ ಚಿಕಿತ್ಸೆಗೆ ನಿರ್ಧರಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತನ್ನ ಸಿಬ್ಬಂದಿಗೆ 10 ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಸಂಬಂಧ 5 ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಕರಾರಸಾನಿಗಮದ ನೌಕರರ ಕಾರ್ಯ ಸ್ವರೂಪ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಹೃದಯ ಸಂಬಂಧಿ ಶವಾಸಣೆಗಳನ್ನು ಪರೀಕ್ಷೆಗಳನ್ನು ನಿರಂತರವಾಗಿ ಮಾಡಿಸುವುದರಿಂದ ಸಂಭವನೀಯ ಹೃದಯಾಘಾತವನ್ನು ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ನಿಗಮದ ಎಲ್ಲಾ ನೌಕರರು/ ಅಧಿಕಾರಿಗಳನ್ನು ಹೃದಯಕ್ಕೆ ಸಂಬಂಧಿಸಿದ ನಿರ್ಧಿಷ್ಟವಾದ ಪರೀಕ್ಷೆ/ ತಪಾಸಣೆಗಳಿಗೆ ಒಳಪಡಿಸುವ ಅವಶ್ಯಕತೆಯನ್ನು ಮನಗಂಡು 2018 ನೇ ಸಾಲಿನಲ್ಲಿ ನಿಗಮದ ನಿರ್ದೇಶಕರ ಮಂಡಳಿಯ ಅನುಮೋದನೆಯನ್ನು ಪಡೆದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಐದು ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಯೂನಿಟ್‌ನ ಸಹಯೋಗದೊಂದಿಗೆ ಕೆಳಕಂಡ ಹತ್ತು ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನುನಡೆಸಲಾಗುತ್ತದೆ.

ECG
Echo
TMT
X-Ray
FBS/PPBS/RBS
Complete Haemogram
Lipid Profile
RFT
Serum Electrolyte
Urine Routine

ಮುಂದುವರೆದು, ನಿಗಮದ ನೌಕರರು ಮತ್ತು ಅಧಿಕಾರಿಗಳನ್ನು ತಪಾಸಣೆಗೆ ನಿಯೋಜಿಸುವ ಸಂಬಂಧ ಉಲ್ಲೇಖಿತ ಸುತ್ತೋಲೆಗಳಲ್ಲಿ ವಿವರವಾದ ನಿರ್ದೇಶನಗಳನ್ನು ನೀಡಲಾಗಿದೆ. ಪ್ರಸ್ತುತ ದಿನಾಂಕ: 02.11.2023 ರಿಂದ ಮುಂದಿನ ಐದು ವರ್ಷಗಳವರೆಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾಸಂಸ್ಥೆಯೊಂದಿಗೆ ಒಡಂಬಡಿಕೆಯನ್ನು ನವೀಕರಿಸಲಾಗಿದ್ದು, ಈ ಹಿಂದಿನ ಪದ್ಧತಿಯಂತೆ 40 ವರ್ಷ ಮತ್ತು ಮೇಲ್ಪಟ್ಟ ಅಧಿಕಾರಿ/ಸಿಬ್ಬಂದಿಗಳನ್ನು ವಾಹನಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಹೃದಯ ತಪಾಸಣೆಗೆ ನಿಯೋಜಿಸುವ ಕುರಿತು ಈ ಕೆಳಕಂಡ ನಿರ್ದೇಶನಗಳನ್ನು ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...