![](https://kannadadunia.com/wp-content/uploads/2024/01/Farmers-4.jpg)
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರ ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ.
ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರದಿಂದ ಬರ ಪರಿಹಾರ ಹಣ ಇನ್ನೂ ಬಂದಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಸಭೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರೂ ಉಪಯೋಗವಾಗಿಲ್ಲ. ಪರಿಣಾಮ ರಾಜ್ಯ ಸರ್ಕಾರವೇ ಮೊದಲ ಕಂತಿನಲ್ಲಿ 2,000 ರೂ. ನೀಡಲು ಮುಂದಾಗಿದೆ ತಿಳಿಸಿದ್ದಾರೆ.
ಪ್ರೂಟ್ಸ್ ತಂತ್ರಾಂಶದಲ್ಲಿ ಶೇ. 75 ರಷ್ಟು ಸಂಪೂರ್ಣ ಜಮೀನು ಮಾಹಿತಿ ನವೀಕರಿಸಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ತಲುಪಿಸಲಾಗುವುದು ಎಂದು ಹೇಳಿದ್ದಾರೆ.