alex Certify ‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘BMTC’ ಬಸ್ ವ್ಯವಸ್ಥೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘BMTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 ರಿಂದ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅನುಮತಿ ನೀಡಿದೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...