ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಎಸ್.ಎಫ್.ಸಿ ಅನುದಾನದ ಶೇ.24.10, 7.25 ಮತ್ತು 5 ರ ಎಸ್.ಸಿ.ಎಸ್.ಪಿ ಉಪ ಘಟಕದಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಎಂಬಿಬಿಎಸ್, ಬಿಇ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ಖರೀದಿಗಾಗಿ ಸಹಾಯಧನ ಮತ್ತು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಕಲೆ ಸಾಂಸ್ಕತಿಕ ಹಾಗೂ ವ್ಯಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ (ಭಾಗವಹಿಸಿದ ಬಗ್ಗೆ ದಾಖಲಾತಿ ಪ್ರಮಾಣ ಪತ್ರ ಕಡ್ಡಾಯ) ಹಾಗೂ ಉದ್ಯೋಗಸ್ಥ ವಿಕಲನಚೇತನರಿಗಾಗಿ ತ್ರಿಚಕ್ರ ವಾಹನ ನೀಡಲು ಅರ್ಹರಿಂದ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ಗುರುತಿನ ಕಾರ್ಡ್, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪ್ರಸ್ತಕ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕ ಪಟ್ಟಿ, ಭಾವಚಿತ್ರ, ವಿಕಲಚೇತನ ಇದ್ದಲ್ಲಿ ವಿಕಲಚೇತನ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಡಿಸೆಂಬರ್ 28 ರೊಳಗಾಗಿ ಅರ್ಜಿಯೊಂದಿಗೆ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.