ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ವೈದ್ಯಕೀಯ, ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಸಾಲ ನೀಡುವ ಅರಿವು ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಅರಿವು ಯೋಜನೆಯಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ವಾರ್ಷಿಕ 1 ಲಕ್ಷ ರೂ. ಸಾಲವನ್ನು ಶೇ. 2 ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತಿತ್ತು. ಆದರೆ ಈ ಕಾರ್ಯಕ್ರಮವನ್ನು ಹಿಂದಿ ಸರ್ಕಾರ ಸ್ಥಗಿತಗೊಳಿಸಿದ್ದ ಹಿನ್ನೆಲೆಯಲ್ಲಿ ಇದೀಗ ಈ ಯೋಜನೆಗೆ ಮರು ಚಾಲನೆ ನೀಡಲಾಗಿದೆ.
ಸರ್ಕಾರದ ವಸತಿ ನಿಲಯಗಳಲ್ಲಿ ಪ್ರವೇಶ ದೊರಕದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ವಿದ್ಯಾಸಿರಿ ಯೋಜನೆಯಡಿ ವಾರ್ಷಿಕ 15,00 ರೂ. ನೀಡುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರೆಸಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.