ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಆನ್ಲೈನ್ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2024-25ನೇ ಸಾಲಿಗೆ ಸಂಬಂಧಿಸಿದಂತೆ ಪಿಯುಸಿ, ಡಿಪ್ಲೋಮಾ, ಐಟಿಐ,ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್ಲೈನ್ ಅರ್ಜಿಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ
https://ssp.postmatric.karnataka.gov.in/
(ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – SSP)
https://dom.karnataka.gov.in
ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ ದಿನಾಂಕ:
23.08.2024.
ಆನ್ ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:
31.10.2024.
ಅರ್ಹತೆ
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್
ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿಕುಟುಂಬದ ವಾರ್ಷಿಕ ಆದಾಯವು ರೂ.2.00 ಲಕ್ಷಗಳನ್ನು ಮೀರಿರಬಾರದು
ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.
ವಿಶೇಷ ಸೂಚನೆ
ಮರುಪಾವತಿ ಯೋಜನೆಯ ಪ್ರಯೋಜನ ಪಡೆಯಲು
ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI
ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
ಈ ಹಿಂದೆ ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸತಕ್ಕದ್ದು,
ಸದರಿ ಶುಲ್ಕ ಮರುಪಾವತಿ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ.
ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ ಸೈಟ್ https://dom.karnataka.gov.in ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದಾಗಿದೆ.