ಬೆಂಗಳೂರು : ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಿಎಂಟಿಸಿ (BMTC) ಗುಡ್ ನ್ಯೂಸ್ ನೀಡಿದ್ದು, ಆ.30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದೆ.
ಪದವಿ, ವೃತ್ತಿಪರ, ಸ್ನಾತಕೋತ್ತರ, ತಾಂತ್ರಿಕ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿ ಬಸ್ ಪಾಸ್ ಮಾನ್ಯತೆ ಅವಧಿಯನ್ನು ಸೆ.30ರವರೆಗೆ ವಿಸ್ತರಿಸಿ ಬಿಎಂಟಿಸಿ ಆದೇಶಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ ( ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) 2022-23 ನೇ ಸಾಲಿನ ಅಂತಿಮ ಸೆಮಿಸ್ಟರ್ ನ ಪದವಿ, ವೃತ್ತಿಪರ ಕೋರ್ಸ್ ಹಾಗೂ ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸ್ ಗಳ ಪರೀಕ್ಷೆ ಹಾಗೂ ತರಗತಿಗಳು ಇನ್ನೂ ಮುಕ್ತಾಯವಾಗದ ಹಿನ್ನೆಲೆ ಕೆಲವು ಕಾಲೇಜು/ವಿಶ್ವವಿದ್ಯಾಲಯಗಳು ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತೃದೃಷ್ಟಿಯಿಂದ ದಿನಾಂಕ 30.09.2023 ರವರೆಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.
‘ದ್ವಿತೀಯ PUC’ ಪೂರಕ ಪರೀಕ್ಷೆ-2′ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಬೆಂಗಳೂರು : ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ-2 ಜರುಗಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಕ.ರಾ.ರ.ಸಾ.ನಿಗಮವು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.