ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 25 ಸಾವಿರ ರೂ. ವರೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬಿ.ಎಡ್, ಡಿ.ಎಡ್ ಕೋರ್ಸುಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ 25 ಸಾವಿರ ರೂ. ವರೆಗೆ ಪ್ರೋತ್ಸಾಹಧನ ಸಿಗಲಿದೆ.
ಹೆಚ್ಚಿನ ಮಾಹಿತಿಗಾಗಿ https:\\dom.Karnataka.gov.in ಅಥವಾ 8277799990 ಸಂಖ್ಯೆಗೆ ಕರೆ ಮಾಡಬಹುದು ಎಂದು ಸೂಚನೆ ನೀಡಲಾಗಿದೆ.